ಸರ್ಕಾರದಿಂದ ಜನತೆಗೆ ಮತ್ತೊಂದು ಸಿಹಿ ಸುದ್ದಿ..!

ಸರ್ಕಾರದಿಂದ ಜನತೆಗೆ ಮತ್ತೊಂದು ಸಿಹಿ ಸುದ್ದಿ..!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯಲ್ಲಿ ಮಹತ್ವದ ಗ್ಯಾರಂಟಿ ಯಾದ ಗೃಹಜೋತಿ ಯೋಜನೆಯಿಂದ ಎಲ್ಲಾ ಜನತೆಗೂ ಬಹಳ ಉಪಯುಕ್ತವಾಗಿದೆ.

ಅದರಂತೆ ಇನ್ನು ಮುಂದೆ ರಾಜ್ಯದಲ್ಲಿ ತಡೆರಹಿತ ವಿದ್ಯುತ್ ಪೊರೆಕೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

ಹೌದು, ಇನ್ನು ಮುಂದೆ ಕರ್ನಾಟಕ ರಾಜ್ಯದಲ್ಲಿ ತಡರಹಿತ ನಿರಂತರ ವಿದ್ಯುತ್ ಪೂರೈಕೆ ಮಾಡಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಲಬುರಗಿ ಮತ್ತು ಮೈಸೂರು ಭಾಗದಲ್ಲಿ 400ಕವಿ ವರೆಗಿನ ಪ್ರಸರಣ ಮಾರ್ಗಗಳು ಮತ್ತು ಸಬ್ ಸ್ಟೇಷನ್ ಗಳ ನಿರ್ವಹಣೆಗಾಗಿ ಎರಡು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್ ಫಾರ್ಮ್ ವಾಹನಗಳನ್ನು ನಿಯೋಜಿಸಲಿದೆ.

ಸಾಮಾನ್ಯವಾಗಿ ವಿದ್ಯುತ್ ಮಾರ್ಗ ನಿರ್ವಹಣೆ ಸಂದರ್ಭದಲ್ಲಿ ಗಂಟೆಗಟ್ಟಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಬೇಕಾಗುತ್ತದೆ. ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್ ಫಾರ್ಮ್ ವಾಹನಗಳ ಬಳಕೆಯಿಂದ ಗ್ರಾಹಕರಿಗೆ ತಡರಹಿತ ವಿದ್ಯುತ್ ಪೂರೈಸಬಹುದಾಗಿದೆ. ಈ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

 

Related