ಡಿ ಬಾಸ್ ಗೆ ಮತ್ತೊಂದು ಸಂಕಷ್ಟ!

ಡಿ ಬಾಸ್ ಗೆ ಮತ್ತೊಂದು ಸಂಕಷ್ಟ!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮತ್ತೆ ಮತ್ತೆ ಸುದ್ದಿ ಆಗುತ್ತಿರುವ ನಟ ದರ್ಶನ್ ಅವರು ಈಗ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಹೌದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಿಗೆ ಅಭಿಮಾನಿಗಳು ಲಾಂಗ್ ಉಡುಗೊರೆಯಾಗಿ ನೀಡಿದ್ದಾರೆ. ಇನ್ನು ಈ ಲಾಂಗ್ ಹಿಡಿದು ಫೋಟೋಗೆ ಫೋಸ್ ನೀಡಿರುವ ನಟ ದರ್ಶನ್ ಅವರ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

2 ದಿನಗಳ ಹಿಂದೆ ರಾಜ್ಯ ರಾಜಧಾನಿಯ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಟ ದರ್ಶನ್‌ ಲಾಂಗ್‌ ಹಿಡಿದಿದ್ದಾರೆ. ಆ ಸಂದರ್ಭದಲ್ಲಿ ಲಾಂಗ್ ಜೊತೆ ಫೋಟೋಗೆ ಪೋಸ್ ಕೊಟ್ಟಿರುವ ದರ್ಶನ್,  ಅಭಿಷೇಕ್ ಅಂಬರೀಶ್ ಸೇರಿದಂತೆ ಅನೇಕ ಅಭಿಮಾನಿಗಳು ಭಾಗಿಯಾಗಿದ್ದರು.

ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳೆಯರ ಬಳಗ ವತಿಯಿಂದ ಅಯೋಜಿಸಿದ್ದ ಕಾರ್ಯಕ್ರಮ ಇದಾಗಿದ್ದು, ರೌಡಿ ಶೀಟರ್‌ಗಳು‌ ತಮ್ಮ ಹುಟ್ಟು ಹಬ್ಬದ ಕಾರ್ಯಕ್ರಮಗಳಲ್ಲಿ ಈ ರೀತಿಯಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡ್ತಾರೆ.. ಲಾಂಗ್ ನಿಂದ ಕೇಕ್ ಕತ್ತರಿಸೋದು, ಲಾಂಗ್ ಹಿಡಿದು ಡ್ಯಾನ್ಸ್ ಮಾಡೋದು ಮಾಡ್ತಾರೆ.. ಇದು ಕಾನೂನಾತ್ಮಕವಾಗಿ ಸರಿಯಲ್ಲ. ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಬಹುದು. ಸಾರ್ವಜನಿಕ ಸ್ಥಳಗಳಲ್ಲಿ‌ ಈ ರೀತಿಯಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡೋದು ಕಾನೂನು ಬಾಹೀರ. ಲಾಂಗ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವ ಫೋಟೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Related