ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೇಮಕ

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೇಮಕ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ಅನ್ವಯ ನಗರದ ಕಾಂಗ್ರೇಸ್ ಕಚೇರಿಯಲ್ಲಿ ಸಭೆ ಹಮ್ಮಿಕೊಂಡು, ಸಂಜೀವ ಯಲ್ಲಪ್ಪ ಹೊಸಮನಿ (ಕಂಬಾಗಿ) ಇವರನ್ನು ವಿಜಯಪುರದ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಅಧ್ಯಕ್ಷ ಆರ್.ಕೆ. ಜವನರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ರಾಜು ಆಲಗೂರ, ವಿಜಯಪುರ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ವಿದ್ಯಾರಾಣಿ ತುಂಗಳ ಉಪಸ್ಥಿತರಿದ್ದರು.

Related