ಕಾಮಗಾರಿಗಳ ಪ್ರಾರಂಭಕ್ಕೆ ಅನುಮೋದನೆ

ಕಾಮಗಾರಿಗಳ ಪ್ರಾರಂಭಕ್ಕೆ ಅನುಮೋದನೆ

ಮುದ್ದೇಬಿಹಾಳ : ತಾಳಿಕೋಟಿ ಮತ್ತು ಮುದ್ದೇಬಿಹಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಾರಂಭಕ್ಕಾಗಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಕಾಂತ ಶಿವಪೂರೆ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ತಾಳಿಕೋಟಿ ಮತ್ತು ಮುದ್ದೇಬಿಹಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗಾಗಿ ಸದ್ಯ ಸರ್ಕಾರ ಸುಮಾರು 2 ಕೋಟಿ ರೂ. ಗಳ ವಿಶೇಷ ಅನುದಾನ ನೀಡಿದೆ.

ಈ ಪೈಕಿ ಎಸ್‌ಸಿಎಸ್‌ಟಿ ಜನಾಂಗದ ಬಡಾವಣೆಗಳಿಗೆ ಶೇ. 25 ರಷ್ಟು ಮತ್ತು ಶೇ. 5 ರಷ್ಟು ಅನುದಾನ ಅಂಗವಿಕಲರಿಗೆ ಪ್ರತ್ಯೇಕವಾಗಿ ಮೀಸಲಿಡಲಾಗುತ್ತದೆ. ಮಹಿಳಾ ಮತ್ತು ಕಲ್ಯಾಣ ಇಲಾಖೆ 10 ಲಕ್ಷ ರೂ. ಸಮಾಜ ಕಲ್ಯಾಣ ಇಲಾಖೆ 1 ಲಕ್ಷ ರೂ. ವಿಶೇಷ ಅನುದಾನವನ್ನು ಪಡೆದು ಕ್ರಿಯಾಯೋಜನೆ ತಯಾರಿಸಿ ಇದೇ ಮೇ 30 ರೊಳಗಾಗಿ ಸರ್ಕಾರಕ್ಕೆ ಸಲ್ಲಿಸಿ ಆದಷ್ಟು ಬೇಗ ಹಂಚಿಕೆ ಮಾಡಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

Related