ಹಾವೇರಿ: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರವರು ನಮ್ಮನ್ನೆಲ್ಲ ಅಗಲಿ ಈಗಾಗಲೇ ಮೂರು ವರ್ಷಗಳೇ ಕಳೆದರೂ ಕೂಡ ಅವರ ಮೇಲಿರುವ ಪ್ರೀತಿ ಮಾತ್ರ ಅಭಿಮಾನಿಗಳಿಗೆ ಕಡಿಮೆಯಾಗಿಲ್ಲ.
ಅದಕ್ಕೆ ಸಾಕ್ಷಿ ಎಂಬಂತೆ ಇದೀಗ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನವನ್ನು ಅಭಿಮಾನಿಗಳು ಕಟ್ಟಿಸಿದ್ದಾರೆ.
ಹೌದು, ಹಾವೇರಿ ಜಿಲ್ಲೆಯ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ಇದನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಸಿದರು.
ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು.
ಪುನೀತ್ ಅವರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜಕುಮಾರ್ ಮೂರ್ತಿ ಅನಾವರಣ ಮಾಡಿ, ಪ್ರಕಾಶ ಪುತ್ರಿಗೆ ಅಪೇಕ್ಷಾ ಎಂದು ನಾಮಕರಣ ಮಾಡಿದರು. ಅಪ್ಪು ಮೂರ್ತಿಯನ್ನು ನೋಡಿದ ಅಶ್ವಿನಿ ಭಾವುಕರಾದರು.
ಪುನೀತ್ ದೇವಸ್ಥಾನ ಉದ್ಘಾಟನೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶ್ವಿನಿ ಅವರು, ಅದಕ್ಕೆ ಅಭಿಮಾನಿಗಳೇ ದೇವರು ಅನ್ನೋದು, ಇಂತಹ ಅಭಿಮಾನಿ ಸಿಕ್ಕಿರುವುದು ನಮ್ಮ ಪುಣ್ಯ. ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ನಮ್ಮ ಪುಣ್ಯ ಎಂದರು.