ಅಪರಾಧಿಗಳು ಮುಟ್ಟಿ ನೋಡಿಕೊಳ್ಳುವಂತೆ ಕ್ರಮ ಕೈಗೊಳ್ಳುತ್ತೇವೆ: ಆರಗ ಜ್ಞಾನೇಂದ್ರ

ಪಿಎಸ್ಐ ಪರೀಕ್ಷಾ ಹಗರಣ ಸಂಬಂಧ ನಡೆಯುತ್ತಿರುವ ಸಿಐಡಿ ತನಿಖೆ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗಿತ್ತಿದೆ. ಈ ಕೇಸ್ ನಲ್ಲಿ ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ಅವರು ಎಚ್ಚರಿಸಿದ್ದಾರೆ.

ಕಲಬುರಗಿ: ದೇಶಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿರುವ ಪಿಎಸ್ ಐ ಪರೀಕ್ಷಾ ಹಗರಣ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಹಲವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಅವರಿಂದ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದರು. ಕಲಬುರಗಿ ಬೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಐಡಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಹಗರಣ ಮಾಡುವವರು ಭವಿಷ್ಯದಲ್ಲಿ ಮುಟ್ಟಿ ನೋಡಿಕೊಳ್ಳುವಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಎಚ್ಚರಿಸಿದ್ದಾರೆ.

Related