ಸಿಎಂ ಹಾಡಿ ಹೊಗಳಿದೆ ಅರವಿಂದ ಲಿಂಬಾವಳಿ

ಸಿಎಂ ಹಾಡಿ ಹೊಗಳಿದೆ ಅರವಿಂದ ಲಿಂಬಾವಳಿ

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ, ದಲಿತರ ಬಗ್ಗೆ ಅತ್ಯಂತ ಕಾಳಜಿ ಇದೆ. ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ. ಇಬ್ಬರೂ ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಕೊಡುತ್ತಾರೆ ಎಂದು ಭೋವಿ ಸಮುದಾಯದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ.

ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ. ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.

ಅರವಿಂದ ಲಿಂಬಾವಳಿ, ತಮ್ಮ ಪಕ್ಷದ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿ ಆರ್. ಅಶೋಕ ಮತ್ತು ಬಿ.ವೈ.ವಿಜಯೇಂದ್ರ ವಿರೋಧ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಈ ಹೊಂದಾಣಿಕೆಯಿಂದಲೇ ಅವರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನೂ ಗೆಲ್ಲಿಸಬಹುದು. ಹಾಗಾಗಿ ಅವರನ್ನು ನೇಮಕ ಮಾಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ 66 ಶಾಸಕರಲ್ಲಿ ಕೆಲವರು ಸ್ವಂತ ಶಕ್ತಿ ಮೇಲೆಯೇ ಗೆದ್ದಿದ್ದಾರೆ. ಇನ್ನೂ ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದು ಹೊಂದಾಣಿಕೆ ಮಾಡಿಕೊಳ್ಳುವವರ ಕಾಲ  ಎಂದು ಲೇವಡಿ ಮಾಡಿದರು.

Related