ಮೈಸೂರು, ಫೆ. 27 : ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತವಾಗಿದೆ. ಮೈಸೂರಿನಲ್ಲಿರುವ ಅವರ ನಿವಾಸದಲ್ಲಿಯೇ ಘಟನೆ ಸಂಭವಿಸಿದ್ದು ಸದ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಬೋಗಾದಿ ರಸ್ತೆಯ ಬಳಿ ಅರ್ಜುನ್ ಜನ್ಯ ಐಷಾರಾಮಿ ವಿಲ್ಲಾ ಒಂದನ್ನು ಖರೀದಿಸಿದ್ದರು.
ಸಮಯ ಸಿಕ್ಕಾಗಲೆಲ್ಲ ಮೈಸೂರಿಗೆ ಬರುತ್ತಿದ್ದ ಜನ್ಯ ಅದೇ ವಿಲ್ಲಾದಲ್ಲಿ ಉಳಿದುಕೊಳ್ಳುತ್ತಿದ್ದರು. ನಿನ್ನೆ ಸಹ ಇದೇ ವಿಲ್ಲಾಕ್ಕೆ ಬಂದಿದ್ದು ತಡರಾತ್ರಿಯಲ್ಲಿ ಹೃದಯಾಘಾತವಾಗಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಲಭಿಸಿದೆ.