ಶ್ರೀರಾಮುಲು ಬಂಧನ..!

ಶ್ರೀರಾಮುಲು ಬಂಧನ..!

ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹೊಗಳಿಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಿನ್ನೆ ಬಳ್ಳಾರಿಯಲ್ಲಿ ಪ್ರತಿಭಟನೆಯನ್ನು ಕೈಗೊಂಡಿತ್ತು.

ಇನ್ನು ಪ್ರತಿಭಟನೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಕೂಡ ಭಾಗಿಯಾಗಿದ್ದರು. ಶ್ರೀರಾಮುಲವರನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದರಿಂದ ಅವರನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಡಿಕೆಶಿ ಶಾಸಕರಿಗೆ ಮತ್ತು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕ್ಕೆ..?

ಹೌದು, ನಿನ್ನೆಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶ್ರೀರಾಮುಲು ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿತ್ತು. ಈ ಸಂಬಂಧ ಇಂದು ಶ್ರೀರಾಮುಲು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಬಂಧನಕ್ಕೆ ಕಾರಣ ನೀಡಿ ಎಂದು ಆಕ್ರೋಶ ವ್ಯಕ್ತವಾಯ್ತು. ಈ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗೋವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಶ್ರೀರಾಮುಲು ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟು ಹಿಡಿದಿದ್ದರು.

ಪ್ರತಿಭಟನೆಗೆ ಒಂದು ದಿನ ಮಾತ್ರ ಅನುಮತಿ ಪಡೆದಿದ್ದರು. ಅಹೋರಾತ್ರಿ ಸೇರಿದಂತೆ ಇಂದು ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಬಳಿ ಶ್ರೀರಾಮುಲು ಅವರ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

Related