ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ

ಕೊಡಗು:ಕೋವಿಡ್ ಗೆ ಸಂಬಂಧಪಟ್ಟಂತೆ ಆಶಾ ಕಾರ್ಯಕರ್ತೆಯರಿಗೂ ಕೊರೋನಾ ತಗುಲಿದೆ, ಅವರ ಜೊತೆಗೆ ಪೊಲೀಸರಿಗೂ ಸೋಂಕು ಅಂಟಿದೆ. ಹೀಗಾಗಿ ಅವರಿಗೂ ವಿಶೇಷ ಚಿಕಿತ್ಸೆ ನೀಡಲು ಸರ್ಕಾರ ಕ್ರಮವಹಿಸಿದೆ ಎಂದು ಸಚಿವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಶೋಕ್, ಜಗದೀಶ್ ಶೆಟ್ಟರ್ ಅವರು ಹಿರಿಯ ನಾಯಕರಾಗಿದ್ದಾರೆ. ಅವರು ಒಟ್ಟಿಗೆ ಮಾತನಾಡಿದರೆ ಪ್ರತ್ಯೇಕ ಅರ್ಥ ಕಲ್ಪಿಸಬೇಕಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೋರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರಿಂದ ಅದಕ್ಕೆ ತಗುಲುವ ೧೨.೭ಕೋಟಿ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದಲೇ ಭರಿಸಲಾಗುತ್ತಿದೆ. ರಾಜ್ಯದಲ್ಲಿ  ೪೨೨೫೦ ಆಶಾ ಕಾರ್ಯಕರ್ತೆಯರಿದ್ದು,

ಈಗಾಗಲೇ ೨೧ ಸಾವಿರ ಮೇಲ್ಪಟ್ಟು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನವನ್ನು ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದವರಿಗೂ ವಿತರಣೆಯಾಗಲಿದೆ. ಇದಕ್ಕಾಗಿ ಸ್ವತಃ ನಾನೇ ಜಿಲ್ಲೆಗಳಿಗೆ ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇನೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ಸಹಕಾರ ಇಲಾಖೆ ವತಿಯಿಂದ ೫೩ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ನೀಡಿದ್ದೇವೆ ಎಂದು ತಿಳಿಸಿದರು.

Related