ಡಿಸಿಎಂಗೆ ಅಶ್ವಥ್‌ ನಾರಾಯಣ್‌ ಟಾಂಗ್‌

ಡಿಸಿಎಂಗೆ ಅಶ್ವಥ್‌ ನಾರಾಯಣ್‌ ಟಾಂಗ್‌

ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ವಿಜಯದಶಮಿಯ ದಿನದಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ಖಂಡಿಸಿ ಈಗಾಗಲೇ ವಿಪಕ್ಷ ನಾಯಕರು ಡಿಕೆ ಶಿವಕುಮಾರ್ ಅವರ ವಿರುದ್ಧ ಕಿರಿ ಕಾರುತ್ತಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಬೆಂಗಳೂರಿಗೂ ತಮಗೂ ಏನು ಸಂಬಂಧ ಎಂದು ಕೇಳಿದಾಗಲೆಲ್ಲ ಉತ್ತರಿಸಲಾಗದೇ ತಡಬಡಿಸುತ್ತಿದ್ದ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನ ಜತೆ ಸಂಬಂಧ ಕಲ್ಪಿಸಿಕೊಳ್ಳಲು ಶಾರ್ಟ್‌ಕಟ್‌ ಮಾರ್ಗ ಅನುಸರಿಸಿದಂತಿದೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ತಾವು ಬೆಂಗಳೂರಿನವರು ಎಂದು ಹೇಳಿಕೊಳ್ಳಬಹುದು ಎನ್ನುವ ಆಲೋಚನೆ ಅವರದ್ದಾಗಿರಬಹುದು ಎಂದು ಟಾಂಗ್‌ ನೀಡಿದ್ದಾರೆ.

ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ಆಸ್ತಿಯ ಮೌಲ್ಯ ಹತ್ತುಪಟ್ಟು ಹೆಚ್ಚಾಗಲಿದೆ ಎನ್ನುವ ಮೂಲಕ ನಿಮ್ಮ ಕೃಷಿ ಭೂಮಿಯನ್ನು ಮಾರಿಕೊಳ್ಳಿ ಎಂದು ಡಿಕೆ ಶಿವಕುಮಾರ್‌ ಅವರು ಪರೋಕ್ಷವಾಗಿ ರೈತರಿಗೆ ಕರೆ ನೀಡಿದ್ದಾರೆ. ಕನಕಪುರವನ್ನು ಕನಕಪುರವಾಗಿ ಅಭಿವೃದ್ಧಿಪಡಿಸಲಾಗದ ಡಿಕೆ ಶಿವಕುಮಾರ್‌ ಅವರಿಗೆ ಈ ಆಲೋಚನೆ ಬಂದಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

 

Related