ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಅಶ್ವಥ್ ನಾರಾಯಣ್ ಕೈವಾಡ..!

ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಅಶ್ವಥ್ ನಾರಾಯಣ್ ಕೈವಾಡ..!

ಬೆಂಗಳೂರು, ಆ 02 : ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಅನ್ನೋ ಆರೋಪ ಕೇಳಿಬಂದಿದ್ದು, ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಮಾಧ್ಯಮ ವಕ್ತಾರ ಕೆ. ಮಥಾಯಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ನ್ಯಾಯಾಂಗ ತನಿಖೆ ನಡೆಸಿ ಶಿಸ್ತುಕ್ರಮ ಜರುಗಿಸುವಂತೆ ಆಪ್ ಆಗ್ರಹಿಸಿದೆ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್ ಪೂರೈಕೆ ಟೆಂಡರ್ ನಲ್ಲಿ ಬೃಹತ್ ಹಗರಣ ನಡೆದಿದೆ.

ವಿದ್ಯಾರ್ಥಿಗಳಿಗೆ ನೀಡುವ ಟೂಲ್ ಕಿಟ್ ನಲ್ಲಿ 22 ಕೋಟಿ ಹಗರಣ ನಡೆದಿದೆ. 22 ಕೋಟಿ ಟೆಂಡರ್ ಹಗರಣದಲ್ಲಿ ಸಚಿವ ಅಶ್ವತ್ಥ ನಾರಾಯಣ ನೇರ ಕೈವಾಡ ಇದೆ.

ಈಹಗರಣದಲ್ಲಿ ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವ ಅಶ್ವತ್ಥ ನಾರಾಯಣ ನೇರ ಹಸ್ತಕ್ಷೇಪ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹೇಳಿಕೆ ನೀಡಿದ್ದಾರೆ.

Related