ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ಬಹುಮಾನ ..!

ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ಬಹುಮಾನ ..!

ಬೆಂಗಳೂರು, ಆಗಸ್ಟ್ 09 : ಬರ್ಮಿಗ್ ಹ್ಯಾಮ್‌ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕ ಗೆಲ್ಲುವ ಮೂಲಕ ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಬ್ಯಾಡ್ಮಿಂಟನ್ ಮಿಕ್ಸಡ್ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.

 

Related