ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ

ಬೆಂಗಳೂರು: ಕೊನೆಗೂ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತ ಪ್ರಸ್ತಾವನೆ ಪರಿಶೀಲಿಸಿದ್ದು, ೪ ಸಂಸ್ಥೆಗಳ ಹಂತದಲ್ಲಿ ಬೇಡಿಕೆಗಳನ್ನು ಜಾರಿಗೊಳಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳಿಗೆ ತಿಳಿಸಿದೆ.

ಈ ಬೇಡಿಕೆಗಳನ್ನು ಜಾರಿಗೊಳಿಸಿದ ಕುರಿತು ಸರ್ಕಾರಕ್ಕೆ ಮರು ವರದಿ ಸಲ್ಲಿಸುವಂತೆ ಸೂಚಿಸಿದೆ.

ಸದ್ಯಕ್ಕೆ ನಾಲ್ಕು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಆರೋಗ್ಯ ಭಾಗ್ಯ ವಿಮಾ ಯೋಜನೆ ಯಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರದ ಸ್ವಾಯತ್ತ ಅನುದಾನಿತ ಆಸ್ಪತ್ರೆಗಳು ನಗದು ರಹಿತ ಚಿಕಿತ್ಸೆ ನೀಡುವ ಸಂಬಂಧ, ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡು ನಗದು ರಹಿತ ಪದ್ಧತಿ ಜಾರಿಗೆ ತರಲು ಸೂಚಿಸಿದೆ.

Related