ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ

ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಆನಗುಂದಿಯಲ್ಲಿ ಕಾಂಗ್ರೆಸ್ ಮುಖಂಡರ ಹಾಗೂ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಅವರ ಮೇಲೆ ಹಲ್ಲೆಯಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ಮನೆಗೆ ತೆರಳುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದಾನೆ. ಆನಗುಂದಿ ರಸ್ತೆಯಲ್ಲಿರುವ ಪಿಎಲ್​ಡಿ ಬ್ಯಾಂಕ್ ಮುಂದೆ ಘಟನೆ ನಡೆದಿದೆ.

ಇನ್ನು ದುಷ್ಕರ್ಮಿ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ. ಭೂಮಿ ಒತ್ತುವರಿದಾರರಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಸರ್ಕಾರಿ ಶಾಲೆಯ ಭೂಮಿಯ ಒತ್ತುವರಿ ಬಗ್ಗೆ ದೊಡ್ಡಪ್ಪ ದೇಸಾಯಿ ಅವರು ಹೋರಾಟ ಮಾಡಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ನಡೆದಿರಬಹುದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಠಾಣೆ ಸಿಪಿಐ ಪ್ರಕಾಶ್ ಮಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related