ಪ್ಲಾಸ್ಟಿಕ್ ಮಾರಾಟ ಅಂಗಡಿ ಮೇಲೆ ದಾಳಿ..

  • In Crime
  • July 19, 2022
  • 276 Views
ಪ್ಲಾಸ್ಟಿಕ್ ಮಾರಾಟ ಅಂಗಡಿ ಮೇಲೆ ದಾಳಿ..

ಕನಕಪುರ, ಜು 19 : ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರಸಭೆ ಆರೋಗ್ಯ ವಿಭಾಗದ ಸಿಬ್ಬಂದಿ ನಗರದಲ್ಲಿ ದಾಳಿ ನಡೆಸಿ ಸುಮಾರು ೧೫೦ ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.

ಪ್ಲಾಸ್ಟಿಕ್ ಮಾರಾಟ ಮಾಡುವ ೬ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ವಶಕ್ಕೆ ಪಡೆದು, ಮಾಲೀಕರಿಗೆ  ೪,೫೦೦ ದಂಡ ವಿಧಿಸಿದರು.

ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡಬಾರದು. ಮುಂದಿನ ದಿನಗಳಲ್ಲಿ ದಾಳಿ ನಡೆಸಿದಾಗ ಸಿಕ್ಕಿ ಬಿದ್ದರೆ ಅಂತವರಿಗೆ ಹೆಚ್ಚಿನ ದಂಡ ವಿಧಿಸಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಎಚ್ಚರಿಸಿದರು.

Related