ಅತ್ತಿಬೆಲೆ ದುರಂತ: 4 ಅಧಿಕಾರಿಗಳ ಅಮಾನತು

ಅತ್ತಿಬೆಲೆ ದುರಂತ: 4 ಅಧಿಕಾರಿಗಳ ಅಮಾನತು

ಬೆಂಗಳೂರು: ಬೆಂಗಳೂರು ನಗರ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ 14 ಮಂದಿ ತಮ್ಮ ಜೀವನವನ್ನು ಕಳೆದುಕೊಂಡಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳ ಪರಿಶೀಲನೆಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನಾಲ್ಕು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ 4 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Related