ತಾಯಿ ಕಂಡು ಗಳ ಗಳನೆ ಅತ್ತ ಪ್ರಜ್ವಲ್ ರೇವಣ್ಣ..!

ತಾಯಿ ಕಂಡು ಗಳ ಗಳನೆ ಅತ್ತ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.  ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೋಡಲು ಅವರ ತಾಯಿ ಭವಾನಿ ರೇವಣ್ಣ ಅವರು ಸೋಮವಾರ ಭೇಟಿ ಮಾಡಿದ್ದಾರೆ.

ಇನ್ನು ಜೈಲಿನಲ್ಲಿರುವ ಮಗನನ್ನು ಕಂಡು ತಾಯಿ ಭವಾನಿಯವರು ಕಣ್ಣೀರು ಹಾಕಿದ್ದಾರೆ. ಇದಲ್ಲದೆ ಪ್ರಜ್ವಲ್ ರೇವಣ್ಣ ಅವರ ಕೂಡ ಅವರ ತಾಯಿ ಭವಾನಿ ರೇವಣ್ಣ ಅವರನ್ನು ನೋಡಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಮಧ್ಯದ ದೊರೆ ವಿಜಯಮಲ್ಯಗೆ ಮತ್ತೊಂದು ಸಂಕಷ್ಟ

ಹೌದು, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಜೈಲು ಬಂದಿಯಾಗಿದ್ದು, ಇದೇ ಮೊದಲ ಬಾರಿಗೆ ಭವಾನಿ ರೇವಣ್ಣ ಅವರು ಪ್ರಜ್ವಲ್ ರೇವಣ್ಣ ಅವರನ್ನು ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ್ದಾರೆ. ಭವಾನಿಯವರು ಮಗನ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟರು.

 

Related