ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ

ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹತ್ವದ ಗ್ಯಾರಂಟಿ ಯಾದ ಶಕ್ತಿ ಯೋಜನೆ ಜಾರಿಗೆ ಬಂದು ಇಂದು ಶತಕೋಟಿ ಉತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಕಾರ್ಯಕ್ರಮ ಮಾಡಲಾಯಿತು.

ಇಂದು (ನ.24 ಶುಕ್ರವಾರ) ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related