ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ನೀಡಬೇಕು: ವಿಜಯೇಂದ್ರ

ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ನೀಡಬೇಕು: ವಿಜಯೇಂದ್ರ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ಹಗರಣವಾಗಿರುವುದರಿಂದ ಈಗಾಗಲೇ ಬೆಂಗಳೂರು ಸೇರಿದಂತೆ ಹಲವಾರು ಕಡೆ ಕಾಂಗ್ರೆಸ್ ಸರ್ಕಾರ ಮತ್ತು ಸಚಿವ ಬಿ ನಾಗೇಂದ್ರ ಅವರ ವಿರುದ್ಧ ಪ್ರತಿಭಟನೆಯನ್ನು ಕೈಗೊಳ್ಳುತ್ತಿದ್ದಾರೆ.

ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಈಗಾಗಲೇ ವಿರೋಧ ಪಕ್ಷದ ನಾಯಕರುಗಳು ಸಚಿವರನ್ನ ಸಚಿವ ಸ್ಥಾನದಿಂದ ಕೆಳಗೆ ಇಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೇಳುತ್ತಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ..!

ಇನ್ನು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಶಿವಮೊಗ್ಗದಲ್ಲಿರುವ ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರ್ ಅವರ ಕುಟುಂಬಕ್ಕೆ ಭೇಟಿ ನೀಡಿ ಚಂದ್ರಶೇಖರ್ ಅವರ ಪತ್ನಿಗೆ ಸಾಂತ್ವನ ಹೇಳಿದ್ದಾರೆ.

ಹೌದು, ಮೃತ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ನಂತರ ಶುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಿಜಯೇಂದ್ರ ಅವರು, ಸಚಿವ ನಾಗೇಂದ್ರ ಗಮನಕ್ಕೆ ಬಾರದೇ ಈ ಅಕ್ರಮ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು.

 

Related