ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತವಲ್ಲ

ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತವಲ್ಲ

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ ಎಂದು ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯ ಅಭಿಪ್ರಾಯದ ಮೂಲಕ ಮಹತ್ವದ ತೀರ್ಪು ನೀಡಿದೆ.

ಈ ಪ್ರಕರಣದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ 32 ಆರೋಪಿಗಳನ್ನು ನಿರ್ದೋಷಿಗಳು ಎಂದು ಹೇಳಿದೆ.

ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟ ಅಂತ್ಯಗೊಂಡಂತಾಗಿದೆ.

Related