ರಾಜ್ಯಪಾಲರಿಂದ ಗ್ಯಾರಂಟಿ ಯೋಜನೆಗೆ ಬಹುಪರಾಕ್!

ರಾಜ್ಯಪಾಲರಿಂದ ಗ್ಯಾರಂಟಿ ಯೋಜನೆಗೆ ಬಹುಪರಾಕ್!

ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದಲ್ಲಿ ಅಧಿವೇಶನ ಪ್ರಾರಂಭವಾಗಿದ್ದು, ಕರ್ನಾಟಕ ರಾಜ್ಯದ ಯೋಜನೆಗಳ ಬಗ್ಗೆ ರಾಜ್ಯಪಾಲರು ಹಾಡಿ ಹೊಗಳಿದ್ದಾರೆ.

ಅಧಿವೇಶನಕ್ಕೂ ಮೊದಲು ರಾಜಪಾಲರು ಜಂಟಿ ಭಾಷಣ ಮಾತನಾಡಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಹುಪರಾಕ್ ಹೇಳಿದ್ದಾರೆ.

ಇನ್ನು ನಾಳೆಯಿಂದ (ಫೆ. 13 ಮಂಗಳವಾರ) 3 ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇಂದು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ‘ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದರು.

ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು.

Related