ರೇವಣ್ಣಗೆ ಜಾಮೀನು: ಸಂಭ್ರಮ ಬೇಡ: ಎಚ್‌ಡಿಕೆ

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ: ಎಚ್‌ಡಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಸಾವಿರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯನ್ನು ಮಾಜಿ ಸಚಿವ ಎಚ್‌ ಡಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂಬ ಪ್ರಕರಣಕ್ಕೆ ಕಳೆದ ಒಂದು ವಾರದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇಂದು ಮಂಗಳವಾರ ಮೇ 14ರಂದು ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

ಇನ್ನು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಸಂತೋಷವಿಲ್ಲವೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದ್ದನ್ನೂ ಓದಿ:ಪರಿಷತ್ ಚುನಾವಣೆ; ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಪಡುವುದು ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್​​ಡ್ರೈವ್​ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್​ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ. ಎಸ್​ಐಟಿ ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆಯಾ? ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ಏಪ್ರಿಲ್ 22ರಂದು ದಾಖಲಾದ ಎಫ್​ಐಆರ್​ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ನವೀನ್​ ಗೌಡ ನಮ್ಮ ಪಕ್ಷದವರಿಗೆ ಕೊಟ್ಟೆ ಅಂದಿದ್ದಾನೆ. ನಮ್ಮ ಪಕ್ಷದವರಿಗೆ ಪೆನ್​ಡ್ರೈವ್​ ಕೊಟ್ಟಿದ್ದೆ ಎಂದು ಹೇಳಿದ್ದಾನೆ. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Related