ಬೈರತಿ ಬಸವರಾಜ್ ಕಾರು ಅಪಘಾತ

ಬೈರತಿ ಬಸವರಾಜ್ ಕಾರು ಅಪಘಾತ

ಯಾದಗಿರಿ: ಲೋಕಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಪೂರ್ಣಗೊಂಡಿದ್ದು, ಎರಡನೇ ಹಂತದ ಚುನಾವಣೆ ಮೇ 7ನೇ ತಾರೀಕಿನಂದು ನಡೆಯಲಿದ್ದು ಅಭ್ಯರ್ಥಿಗಳು ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಶಾಸಕ ಬಿ ಎ ಬಸವರಾಜ್ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ತೆರಳುತ್ತಿರುವ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ನಡೆದಿದೆ. ಸುರಪುರ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಬೇರೆಯವರ ಕಾರಿನಲ್ಲಿ ತೆರಳಿದ್ದರಿಂದ ಮಾಜಿ ಸಚಿವ ಭೈರತಿ ಬಸವರಾಜ್ ಅದೃಷ್ಟವಶಾತ್​ ಪಾರಾಗಿದ್ದಾರೆ. ಆದರೆ ಭೈರತಿ ಬಸವರಾಜ್‌ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸ್​ ಠಾಣೆಯ ಪಿಎಸ್​ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕ್ರೇನ್​ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿಸಲಾಗಿದೆ. ಹುಣಸಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related