ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್

ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆದ್ದು ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಇದೀಗ ರಾಜ್ಯದಲ್ಲಿ ನೂತನ ಸರ್ಕಾರ ರಚಿಸಿದೆ. ಶನಿವಾರ, ಮೇ 27ರಂದು ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದೇ ವೇಳೆ ಕರ್ನಾಟಕದ ನೂತನ ಸಚಿವರಾಗಿ ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬೈರತಿ ಸುರೇಶ್ ಇದೇ ಮೊದಲ ಬಾರಿಗೆ ಸಚಿವರಾಗಲಿದ್ದಾರೆ.

 

Related