ಬೆಂಗಳೂರು: ಕರ್ನಾಟಕ ಸರ್ಕಾರ ಇನ್ಮುಂದೆ ನಡೆಯಲಿರುವ ಸ್ಥಳೀಯ ಚುನಾವಣೆಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದು, ಇನ್ಮುಂದೆ ನಡೆಯಲಿರುವ ಸ್ಥಳೀಯ ಚುನಾವಣೆಗೆಂದು ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಕುರಿತು ನಿನ್ನೆ ನಡೆದ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ರು. ಇದನ್ನೂ ಓದಿ: ಬ್ಯಾಲೆಟ್ ಪೇಪರ್ ಬಳಕೆ ಮಾಡಿದ್ರೆ ವಿರೋಧ ಪಕ್ಷದವರಿಗೆ ಯಾಕೆ ಆತಂಕ?: ಡಿಕೆಶಿ
ಈ ಸಂಬಂಧ ನಗರದಲ್ಲಿ ಇಂದು (ಶುಕ್ರವಾರ ಸೆಪ್ಟೆಂಬರ್ 05) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.