ಬೆಂಗಳೂರು ಕರಗ ರದ್ದು

ಬೆಂಗಳೂರು ಕರಗ ರದ್ದು

ಬೆಂಗಳೂರು : ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ತೀವ್ರವಾಗಿ ಹರಡುತ್ತಿದೆ. ದೇಶಾದ್ಯಂತ ಹಲವು ಕಡೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದ್ದು, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ನೈಟ್ ಕರ್ಫ್ಯೂ ಮುಂದುವರೆದಿದೆ. ಇದರ ಪರಿಣಾಮ ಈಗ ಐತಿಹಾಸಿಕ ಬೆಂಗಳೂರು ಕರಗಕ್ಕೂ ತಟ್ಟಿದೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಆದೇಶದ ಅನ್ವಯ ಧಾರ್ಮಿಕ ಆಚರಣೆಗಳನ್ನು ನಡೆಸಲು ನಿಷೇಧಿಸಿದೆ. ಆದ್ದರಿಂದ ಈ ಬಾರಿಯ ಬೆಂಗಳೂರು ಕರಗ ಶಕ್ತೊ್ಯೀತ್ಸವ ಕಾರ್ಯಕ್ರಮ ನಡೆಸಲು ಸಾಧ್ಯವಿರುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ತಿಳಿಸಿದರು.

Related