ಸಂಪೂರ್ಣ ಸ್ತಬ್ಧ; ಏನಿರುತ್ತೆ? ಏನಿರಲ್ಲ?

ಸಂಪೂರ್ಣ ಸ್ತಬ್ಧ; ಏನಿರುತ್ತೆ? ಏನಿರಲ್ಲ?

ಬೆಂಗಳೂರು: ಮಹಾಮಾರಿ ಕೊರೋನಾದ ಅಟ್ಟಹಾಸ ಮಿತಿ ಮೀರಿ ಮುಂದುವರೆದಿದ್ದು, ಒಂದು ವಾರಗಳ ಕಾಲ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರವರೆಗೆ ಲಾಕ್‍ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಯಡಿಯೂರಪ್ಪ ಅವರು, ‘ಇತ್ತೀಚೆಗೆ ಕೋವಿಡ್ ಪ್ರಕರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ ಜುಲೈ 14ರರಾತ್ರಿ 8ರಿಂದ 7 ದಿನಗಳ ವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

ಈ ಅವಧಿಯಲ್ಲಿ ಯಾವುದೇ ಅಡೆತಡೆಯಿಲ್ಲದೇ ಹಾಲು, ತರಕಾರಿ, ದಿನಸಿ, ಹಣ್ಣು, ಔಷಧಿ ಮುಂತಾದ ದಿನಬಳಕೆಯ ವಸ್ತುಗಳು ಲಭ್ಯವಾಗಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಸೂಚಿಸಲಾಗುವುದು. ಈಗಾಗಲೇ ನಿಗದಿಯಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿದಿನ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೋನಾ ಹೆಮ್ಮಾರಿಗೆ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜನರಿಗೆ ಧೈರ್ಯ ತುಂಬಿದ ಸಿಎಂ ಅವರು, ಕೊರೋನಾ ಹೋಗಲಾಡಿಸಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

 

Related