ನ್ಯಾಯಾಲಯದ ಆವರಣದಲ್ಲೇ ಬರ್ಬರ ಹತ್ಯೆ!

ನ್ಯಾಯಾಲಯದ ಆವರಣದಲ್ಲೇ ಬರ್ಬರ ಹತ್ಯೆ!

ಬಳ್ಳಾರಿ : ನಗರದ ನ್ಯಾಯಾಲಯದ ಆವರಣದಲ್ಲೇ ಬೆಳ್ಳಂಬೆಳಗ್ಗೆ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಾಗರಿಕರನ್ನು ಬೆಚ್ಚಿ ಬೀಳಿಸಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ತಾರಿಹಳ್ಳಿ ವೆಂಕಟೇಶ ಅವರ ಹತ್ಯೆಗೆ ಕಾರಣ ನಿಖರವಾಗಿ ತಿಳಿದು ಬಂದಿಲ್ಲ, ಆದರೆ ಕೌಟುಂಬಿಕ ಕಲಹ, ರಾಜಕೀಯ ದುರುದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಹೊಸಪೇಟೆಯ ಚಿತ್ತವಾಡ್ಗಿ ನಿವಾಸಿ ತಾರಿಹಳ್ಳಿ ವೆಂಕಟೇಶ ಕೊಲೆಯಾದ ವ್ಯಕ್ತಿ. ಈ ಹತ್ಯೆಗೆ ಸಂಬಂಧಿಸಿದಂತೆ ಮನೋಜ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ವೆಂಕಟೇಶ ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದರೂ, ಇದರ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

Related