ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದರು.

ಡಿಸೆಂಬರ್ 21 ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ವೇಳೆಯೇ ಕಮಲ ನಾಯಕರು ಪರಿಷತ್ ಸಭಾಪತಿ ಮಾಡುವ ಭರವಸೆಯನ್ನು ನೀಡಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಸಚಿವರಾದ ಜೆ.ಸಿ‌‌. ಮಾಧುಸ್ವಾಮಿ,  ಗೋವಿಂದ ಕಾರಜೋಳ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ವೈ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ವಿ‌. ಸಂಕನೂರು ಹಾಜರಿದ್ದರು.

Related