ಬೆಂಗಳೂರು: ಇಂದು ರಾಜ್ಯದಾದ್ಯಂತ ಬಸವೇಶ್ವರ ಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿತ್ತು ಅದರಂತೆ ನಗರ ಜಿಲ್ಲೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಇಂದು (ಬುಧವಾರ ಏ. 30) ರಂದು ನಗರದ ಜಿ ಕೆ ವಿ ಕೆ ಆವರಣದ ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಸಾಂಸ್ಕೃತಿಕ ನಾಯಕ, ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ಇದನ್ನೂ ಓದಿ: ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.
