ಬಿಬಿಎಂಪಿ ಆಶಯವನ್ನು ಬುಡಮೇಲು ಮಾಡಿದ ಸರ್ಕಾರ : ಬಿಜೆಪಿ ವಿರುದ್ಧ ಹೆಚ್ಡಿಕೆ 

ಬಿಬಿಎಂಪಿ ಆಶಯವನ್ನು ಬುಡಮೇಲು ಮಾಡಿದ ಸರ್ಕಾರ : ಬಿಜೆಪಿ ವಿರುದ್ಧ ಹೆಚ್ಡಿಕೆ 

ಬೆಂಗಳೂರು ನಗರದ ವಾರ್ಡ್ ಗಳ ವಿಂಗಡನೆ ಮತ್ತು ಒಬಿಸಿ ಮೀಸಲಾತಿ  ಪ್ರಕ್ರಿಯೆಯನ್ನು  ಎಂಟು ವಾರಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ

ಸರ್ಕಾರಕ್ಕೆ ಸೂಚನೆ ನೀಡಿತ್ತು. ಸುಪ್ರೀಕೋರ್ಟ್ ಸೂಚನೆ ಬೆನ್ನಲೇ ಬಿಬಿಎಂಪಿ ಯ 243 ವಾರ್ಡಗಳ ಕರಡು ಅಧಿಸೂಚನೆಯನ್ನು ಕರ್ನಾಟಕ ಬಿಡುಗಡೆ ಮಾಡಿದೆ.

ವಾರ್ಡ್ ಗಳ ವಿಂಗಡನೆಗೆ  ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ಜನಿಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ.  ಇದೀಗ ಈ ವಾರ್ಡ್ ವಿಂಗಡಣೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ಅಭಿಪ್ರಾಯವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಪಾಲಿಕೆಯಾಗಿದ್ದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು  ನಗರದ ಜನರಿಗೆ ಸ್ಥಳೀಯವಾಗಿ ಅತ್ಯತ್ತಮ ಆಡಳಿತ, ಸೇವೆಗಳು ಲಭ್ಯವಾಗಲಿ ಎಂದು. ಆದ್ರೆ, ಬಿಜೆಪಿ ಸರ್ಕಾರವು ಬಿಬಿಎಂಪಿ  ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ  ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ , ಈಗ ವಾರ್ಡ್ ವಿಂಗಡಣೆಯ ನಾಟಕ ಆಡಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Related