ನಗರದ ಪ್ರಮುಖ ಜಂಕ್ಷನ್ ಗಳ ಜಂಟಿ ಪರಿಶೀಲನೆ

ನಗರದ ಪ್ರಮುಖ ಜಂಕ್ಷನ್ ಗಳ ಜಂಟಿ ಪರಿಶೀಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ ಜಂಕ್ಷನ್ ಗಳನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರು ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಾರಕ್ಕಿ ಜಂಕ್ಷನ್ ಪರಿಶೀಲನೆ:

ಸಿಂಧೂರ ರಸ್ತೆ ಕಡೆಯಿಂದ ಸಾರಕ್ಕಿ ಜಂಕ್ಷನ್ ಕಡೆಯ ರಸ್ತೆಯಲ್ಲಿ ಪಾಲಿಕೆ ವತಿಯಿಂದ ಅಳವಡಿಸಿರುವ ರಸ್ತೆಯ ನಾಮಫಲಕ, ಬೆಸ್ಕಾಂ ನವರು ಅಳವಡಿಸಿರುವ ಕಾಂಕ್ರೀಟ್ ಹಾಗೂ ಝೀರೋ ಟಾಲರೆನ್ಸ್ ಬೋರ್ಡ್‌ನ್ನು ಸ್ಥಳಾಂತರಿಸಿ ಪಾದಚಾರಿ ಮಾರ್ಗವನ್ನು ಸರಿಪಡಿಸಿ ಎಡಭಾಗಕ್ಕೆ ಹೋಗುವ ವಾಹನಗಳಿಗೆ ಸುಗಮವಾಗಿ ಚಲಿಸಲು ಅವಕಾಶ ಕಲ್ಪಿಸಬೇಕಾಗಿರುತ್ತದೆ.

ಸಾರಕ್ಕಿ ಜಂಕ್ಷನ್ ಕಡೆಯಿಂದ ಸಿಂಧೂರ ಜಂಕ್ಷನ್ ಕಡೆಗೆ ಚಲಿಸುವ ಕನಕಪುರ ರಸ್ತೆಯಲ್ಲಿ ಸಾರಕ್ಕಿ ಸಿಗ್ನಲ್‌ಗೆ ಹೊಂದಿಕೊಂಡಂತಿರುವ ಜೆ.ಪಿ.ನಗರ ಮೆಟ್ರೋ ನಿಲ್ದಾಣದ 14ನೇ ಇ ರಸ್ತೆಯಿಂದ ವಾಹನಗಳು ಪಾದಚಾರಿ ಮಾರ್ಗ ಮುಖೇನ ಕನಕಪುರ ರಸ್ತೆಗೆ ವೇಗವಾಗಿ ಬರುವುದರಿಂದ ಅಪಘಾತಗಳು ಉಂಟಾಗುತ್ತಿವೆ. ಈ ಪೈಕಿ 14ನೇ ಇ ಅಡ್ಡರಸ್ತೆ ಹಾಗೂ ಕನಕಪುರ ಮುಖ್ಯ ರಸ್ತೆಯ ಮಧ್ಯದಲ್ಲಿ ಪಾದಚಾರಿ ಮಾರ್ಗಕ್ಕೆ ಗ್ರೀಲ್ ಹಾಗೂ ಪಾದಚಾರಿ ಕಂಬಗಳನ್ನು ಅಳವಡಿಸಿ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕಾಗಿರುತ್ತದೆ.

ಈ ಸಂಬಂಧಿಸಿದಂತೆ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಇಂಜಿನಿಯರ್ ಜಂಕ್ಷನ್ ಅಭಿವೃದ್ಧಿ ಗೊಳಿಸುವ ಸಂಬಂಧ ವಿನ್ಯಾಸ ಸಿದ್ದಪಡಿಸಿಕೊಂಡು, ಇರುವ ಸಮಸ್ಯೆಗಳನ್ನು ಬಗೆಹರಿಸಿ ಸಂಚಾರ ದಟ್ಟಣೆ ಕಡಿಮೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಮಾನ್ಯ ಆಡಳಿತಗಾರರು ಸೂಚನೆ ನೀಡಿದರು.

ಜಯದೇವ ಮೇಲುಸೇತುವೆ ಪರಿಶೀಲನೆ:

ಜಯದೇವ ಮೇಲುಸೇತುವೆ ಈಸ್ಟ್ ಎಂಡ್ ಮುಖ್ಯ ರಸ್ತೆಯ ಕಡೆಗೆ ರೋಡ್ ಸರ್ಪೇಸಿಂಗ್ ಸರಿಪಡಿಸುವ, ವಿದ್ಯುತ್ ದೀಪಗಳನ್ನು ಅಳವಡಿಸುವ, ಕೆಳಸೇತುವೆಯಲ್ಲಿ ವಾಟರ್ ಲಾಗಿಂಗ್ ಆಗುತ್ತಿದೆ. ಅದಕ್ಕಾಗಿ ಡ್ರೈನೇಜ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಆಡಳಿತಗಾರರು ಮೆಟ್ರೊ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೆಟ್ರೋ ವತಿಯಿಂದ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಿದ್ದು, ಕೂಡಲೆ ಅದನ್ನು ಮಾಡಬೇಕು. ಸರ್ವೀಸ್ ರಸ್ತೆಯ ಬದಿ ಕಟ್ಟಡ ಭಗ್ನಾವಶೇಷಗಳನ್ನು ಹಾಕಿದ್ದು, ಅದನ್ನು ತೆರವುಗೊಳಿಸಲು ಸೂಚಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ ಪರಿಶೀಲನೆ:

ಬಿ.ಟಿ.ಎಂ ಲೇಔಟ್ – ಸಿಲ್ಕ್ ಬೋರ್ಡ್ ಕಡೆಗೆ ಎರಡು ಬದಿ ಚರಂಡಿ ಹಾಳಾಗಿರುವುದರಿಂದ ಮಳೆ ಬಂದಾಗ ಚರಂಡಿ ನೀರು ಮತ್ತು ಮಳೆ ನೀರು ಒಟ್ಟಾಗಿ ಸೇರಿ ರಾಜಕಾಲುವೆಯಿಂದ ಉಕ್ಕಿ ಹರಿಯುವುದರಿಂದ ವಾಹನಗಳ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದ್ದು, ರಾಜಕಾಲುವೆ ವಿಭಾಗದಿಂದ ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆಯಾಗುವುದನ್ನು ತಪ್ಪಿಸಲು ಮುಖ್ಯ ಆಯುಕ್ತರು ಸೂಚಿಸಿದರು.

ಹೊಸೂರು ರಸ್ತೆ – ಬಿಟಿಎಂ ರಸ್ತೆ ಕಡೆಗೆ ಹೋಗುವ ಸ್ಥಳದಲ್ಲಿರುವ ಕಾಲುವೆ ಮೇಲೆ ಬಿ.ಎಂ.ಆರ್‌.ಸಿ.ಎಲ್ ನಿಂದ ಸ್ಲ್ಯಾಬ್ ಅಳವಡಿಸಿರುವುದರಿಂದ ವಾಹನಗಳು ಸರಾಗವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಮಟ್ಟವನ್ನು ರಸ್ತೆ ಮಟ್ಟಕ್ಕೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ(Free Left) ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಬ್ಬಲೂರು ಜಂಕ್ಷನ್ ಪರಿಶೀಲನೆ:

ಇಬ್ಬಲೂರು ಜಂಕ್ಷನ್‌ನಿಂದ ಸರ್ಜಾಪುರ ರಸ್ತೆ ಕಡೆಗೆ ವಾಟರ್ ಲಾಗಿಂಗ್ ಆಗದಿರಲು ತೆಗೆದುಕೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ. ಸರ್ಜಾಪುರ ರಸ್ತೆಯಿಂದ ಬಂದು ಹೊರ ವರ್ತುಲ ರಸ್ತೆಗೆ ಹೋಗುವ ಸಂಚಾರಕ್ಕೆ ಹೆಚ್ಚಿನ ಸ್ಥಳಾವಕಾಶವನ್ನು ಕಲ್ಪಿಸಲು ವೃತ್ತದಲ್ಲಿರುವ 2 ಐ ಲ್ಯಾಂಡ್ ಗಳನ್ನು ಮರು ವಿನ್ಯಾಸಗೊಳಿಸಬೇಕಾಗಿರುತ್ತದೆ. ಹರಳೂರು ಜಂಕ್ಷನ್‌ನಿಂದ ಇಬ್ಬಲೂರು ಜಂಕ್ಷನ್‌ ವರೆಗೆ ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಭಿವದ್ಧಿಪಡಿಸುವುದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಲು ಆಡಳಿತಗಾರರು ಸೂಚನೆ ನೀಡಿದರು.

 

Related