ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆ

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಿದ್ದು, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ತಹಶೀಲ್ದಾರ್ ರವರಿಂದ ಆದೇಶ ನೀಡೀರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಆದೇಶಗಳನ್ನು ನೀಡದೇ ಇರುವ ಒತ್ತುವರಿಗಳಿಗೆ ಕೂಡಲೆ ಆದೇಶಗಳನ್ನು ನೀಡಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಮಾನ್ಯ ಉಚ್ಛ ನ್ಯಾಯಾಲಕ್ಕೆ ನೀಡಿರುವ ಮಾಹಿತಿಯಂತೆ ಕ್ರಮ:

ನಗರದಲ್ಲಿ ಬೃಹತ್ ನೀರುಗಾಲುವೆ ಒತ್ತುವರಿ ಹಾಗೂ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛನ್ಯಾಯಾಲಕ್ಕೆ ಪಾಲಿಕೆಯಿಂದ ವರದಿಯನ್ನು ನೀಡಲಾಗಿದೆ. ಅದರಂತೆ, ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅದರಂತೆ, ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3147 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2247 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 900 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 130 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 401 ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 370 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಡಾ. ದಯಾನಂದ್, ವಲಯ ಆಯುಕ್ತರು, ವಕಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related