ಖಾಸಗಿ ಆಸ್ಪತ್ರೆಗಳಿಗೆ ಶಾಕ್ ಕೊಟ್ಟ ಬಿಬಿಎಂಪಿ ಕಮೀಷನರ್

ಖಾಸಗಿ ಆಸ್ಪತ್ರೆಗಳಿಗೆ ಶಾಕ್ ಕೊಟ್ಟ ಬಿಬಿಎಂಪಿ ಕಮೀಷನರ್

ಮಹದೇವಪುರ: ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿರುವ ಸಾಖ್ರ, ವೈದೇಹಿ ಮತ್ತು ಕೊಲಂಬೇಷಿಯಾ ಆಸ್ಪತ್ರೆಗಳಿಗೆ ಬೆಂಗಳೂರು ನಗರ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಅವರು ಭಾನುವಾರ ಮಧ್ಯಾಹ್ನ ದಿಡೀರ್ ಬೇಟಿ ನೀಡಿದ್ದು ಖಾಸಗಿ ಆಸ್ಪತ್ರೆಗಳಿಗೆ ಶಾಕ್ ಕೊಟ್ಟಂತಾಗಿದೆ.

ಹೂಡಿ ಸಮೀಪದ ಖಾಸಗಿ ಹೋಟೆಲ್ ನಲ್ಲಿ ಶನಿವಾರವಷ್ಟೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಅವರು, ಅಧಿಕಾರಿಗಳು ಮತ್ತು ವಲಯ ವ್ಯಾಪ್ತಿಯಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಸಂಬಂದಿಸಿದ ವ್ಯಕ್ತಿಗಳ ಜೊತೆ ಸಭೆ ನಡೆಸಿದ ಬೆನ್ನಲ್ಲೇ ನಗರ ಕಮೀಷನರ್ ಭೇಟಿ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು ಶೇಕಡಾ ಅರ್ಧದಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಬೇಕು. ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಸರಿಯಾದ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಅಂತಹವರಿಗೆ ನೋಟೀಸ್ ಜಾರಿ ಮಾಡಿ ಲೈಸೆನ್ಸ್ ರದ್ದು ಪಡಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಇದೇ ವೇಳೆ ಮಹದೇವಪುರ ಬಿಬಿಎಂಪಿ ವಲಯದ ಕಮಾಂಡಿಂಗ್ ಸೆಂಟರ್ ಗೆ ಬೇಟಿ ನೀಡಿ ಪರಿಶೀಲಿಸಿ ಸರಿಯಾದ ರೀತಿಯ ವ್ಯವಸ್ಥೆ ಕಂಡು ಹಿರಿಯ ಅಧಿಕಾರಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿಶೇಷ ಆಯುಕ್ತ ರಣದೀಪ್, ವಲಯದ ಜಂಟಿ ಆಯುಕ್ತ ವೆಂಕಟಚಲಪತಿ, ಬೆ.ಪೂ.ತಾಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್ ಸೇರಿದಂತೆ ಇತರರು ಹಾಜರಿದ್ದರು.

Related