ಬಿಬಿಎಂಪಿ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ಬಿಬಿಎಂಪಿ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022ರ ಸಂಬಂಧ 243 ವಾರ್ಡ್ ವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಇಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಶ್ರೀ ಬಸವರಾಜು ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ಜಂಟಿ ಮಾಧ್ಯಮ ಗೋಷ್ಠಿ ಹಮ್ಮಿಕೊಂಡಿದ್ದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022ರ ಸಂಬಂಧ 243 ವಾರ್ಡ್​ವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಜಂಟಿ ಮಾಧ್ಯಮಗೋಷ್ಟಿ ನಡೆಯಿತು. ಈ ವೇಳೆ ಈ ಬಗ್ಗೆ ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 79,08,394 ಮತದಾರರು, ಅದರಲ್ಲಿ 41,09,496 ಪುರುಷರು ಹಾಗೂ 37,97,497 ಮಹಿಳೆಯರು, 1401 ತೃತೀಯ ಲಿಂಗಿಗಳು ಇದ್ದಾರೆ. ಮತದಾರರ ಕರಡು ಪ್ರತಿ ಇಂದು‌ ಸಂಜೆ  ಪ್ರಕಟವಾಗಲಿದೆ. ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 2ರ ವರೆಗೆ ಅವಕಾಶ ಇರಲಿದೆ. ಒಂದು ವಾರ್ಡ್‌ನಲ್ಲಿ ಕನಿಷ್ಠ 18,604 ಗರಿಷ್ಠ 51,653 ಮತದಾರರಿದ್ದಾರೆ ಎಂದು ವಿವರಿಸಿದರು.

 

Related