ಮಾರ್ಚಲ್ಲಿ ಬಿಬಿಎಂಪಿ ಚುನಾವಣೆ?

ಮಾರ್ಚಲ್ಲಿ ಬಿಬಿಎಂಪಿ ಚುನಾವಣೆ?

ಬೆಂಗಳೂರು: ಬಹಳ ದಿನಗಳಿಂದ ಎದುರು ನೋಡುತ್ತಿದ್ದ ಬಿಬಿಎಂಪಿ ಚುನಾವಣೆಗೆ ಕಾಲ ಕೂಡಿ ಬಂದಿದ್ದು, 198 ವಾರ್ಡ್‍ಗಳಿಗೆ ಚುನಾವಣೆ ನಡೆಸಲು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ

ಕೆಎಂಸಿ ಕಾಯ್ದೆ ತಿದ್ದುಪಡಿ ಇದಕ್ಕೆ ಅನ್ವಯವಾಗಲ್ಲ. ಹಾಗಾಗಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಮಾರ್ಚ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಒಂದು ತಿಂಗಳೊಳಗೆ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಇದಲ್ಲದೆ, ಮೀಸಲಾತಿ ಅಧಿಸೂಚನೆ ಹೊರಡಿಸಿದ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ.

Related