49 ಸಾವಿರ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಿದ ಬಿಬಿಎಂಪಿ

49 ಸಾವಿರ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಿದ ಬಿಬಿಎಂಪಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶೇಕಡ 60% ಕನ್ನಡ ನಾಮಫಲಕವನ್ನು ಹಾಕುವ ಕುರಿತು ನಗರದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಫೆಬ್ರುವರಿ ಒಳಗಾಗಿ ಸುಮಾರು 60 ಪರ್ಸೆಂಟ್ ನಾಮಪಲಕ ಕಡ್ಡಾಯವಾಗಿ ಹಾಕಬೇಕು ಎಂದು ನೋಟಿಸ್ ನಲ್ಲಿ ಹೇಳಲಾಗಿದೆ ಎಂದು ತಿಳಿದುಬಂದಿದೆ. ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 49 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16,813 ಮಳಿಗೆಗಳು ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿವೆ. 32,428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಫೆಬ್ರುವರಿ ಅಂತ್ಯದೊಳಗಾಗಿ ಎಲ್ಲ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

Related