ಮಳೆ ಅಬ್ಬರ ಧರೆಗೆ ಉರುಳಿದ ಮರಗಳು ತ್ವರಿತ ತೆರವಿಗೆ ಬಿಬಿಎಂಪಿ ಸೂಚನೆ

ಮಳೆ ಅಬ್ಬರ ಧರೆಗೆ ಉರುಳಿದ ಮರಗಳು ತ್ವರಿತ ತೆರವಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವರುಣ ಆರ್ಭಟಿಸುತ್ತಿದ್ದು ಇದರಿಂದ ಮರಗಳು ಧರೆಗೆ ಉರುಳುತ್ತಿದ್ದು ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿರುವುದರಿಂದ ಬಿಬಿಎಂಪಿ ಆಯುಕ್ತರಾಗಿರುವ ತುಷಾರ್ ಗಿರಿನಾಥ್ ಅವರು ಕೂಡಲೇ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೌದು, ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಸುರಿದ ಮಳೆ ಮತ್ತು ಗಾಳಿಯ ಪರಿಣಾಮ 255 ಮರಗಳು ಹಾಗೂ ಸುಮಾರು 1050 ಕೊಂಬೆಗಳು ಮತ್ತು ಕೊಂಬೆಗಳು ಧರೆಗುರುಳಿದ್ದು, ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿವೀಕ್ಷಣೆ ಮಾಡಿದ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಪರಿಹಾರ ಕಾರ್ಯದ ಬಗ್ಗೆ ಮಾಹಿತಿ ಪಡೆದರು.

ಮೊದಲಿಗೆ ಅವರು ಪಶ್ಚಿಮ ವಲಯದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಬಿದ್ದಿರುವ ಮರ ಹಾಗೂ ಮರದ ಕೊಂಬೆಗಳನ್ನು ಪಾಲಿಕೆಯ ಅರಣ್ಯ ಇಲಾಖೆ ವತಿಯಿಂದ ತಂಡ ರಚಿಸಿ ಕ್ರೇನ್‌ಗಳ ಮೂಲಕ ನಡೆಸಲಾಗುತ್ತಿರುವ ತೆರವು ಕಾರ್ಯಚಾರಣೆ ಪರಿಶೀಲಿಸಿದರು. ಮರದ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಬೊಮ್ಮನಹಳ್ಳಿ ವಲಯ ಆಯುಕ್ತರಾದ ಡಾ. ಹರೀಶ್ ಕುಮಾರ್.ಕೆ, ಮುಖ್ಯ ಅಭಿಯಂತರರು (ಬೃಹತ್ ನೀರುಗಾಲುವೆ) ಬಸವರಾಜ್ ಕಬಾಡೆ, ಮುಖ್ಯ ಅಭಿಯಂತರರು (ಬೊಮ್ಮನಹಳ್ಳಿ ವಲಯ) ಶಶಿಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related