ದೇವಾಲಯಗಳ ಪ್ರಸಾದ ಸೇವಿಸುವ ಮುನ್ನ ಇರಲಿ ಎಚ್ಚರ!?

ದೇವಾಲಯಗಳ ಪ್ರಸಾದ ಸೇವಿಸುವ ಮುನ್ನ ಇರಲಿ ಎಚ್ಚರ!?

ದೇವನಹಳ್ಳಿ: ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತಾದಿಗಳೆ ಎಚ್ಚರವಾಗಿರಿ. ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ನೀಡುತ್ತಿರುವ ಲಡ್ಡು ಪಾಯಸ ತಿನ್ನುವ ಮುನ್ನ ಎಚ್ಚರವಾಗಿರಿ.

ಹೌದು, ಭಾನುವಾರ ಡಿಸೆಂಬರ್ 24ರಂದು ಹನುಮಾನ್ ಜಯಂತಿಯ ಪ್ರಯುಕ್ತ ದೇವಾಲಯದಲ್ಲಿ ನೀಡಿದ ಪ್ರಸಾದವನ್ನು ಸೇವಿಸಿ ನೂರಾರು ಜನ ಅಸ್ತವ್ಯಸ್ತಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತದುರ್ದೈವಿ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಲಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು.

ದೇವಾಲಯಗಳಲ್ಲಿ ಪ್ರಸಾದ ತಿಂದಿದ್ದ 100ಕ್ಕೂ ಹೆಚ್ಚು ಭಕ್ತರು ರಾತ್ರಿಯಿಂದ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಅಸ್ವಸ್ಥರನ್ನು ಹೊಸಕೋಟೆ, ಕೋಲಾರ, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಗೆ ದಾಖಲಾದವರಲ್ಲಿ 22ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಸಿದ್ದಗಂಗಮ್ಮ ಅವರಿಗೆ ಪತಿ ಶಿವಣ್ಣ ಲಾಡು ಪ್ರಸಾದ ತಂದುಕೊಂಟಿದ್ದಾರೆ. ಈ ಪ್ರಸಾದವನ್ನು ತಿಂದ ಸಿದ್ದಗಂಗಮ್ಮ ಅವರು ಬೆಳಿಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಕೂಡಲೆ ಅವರನ್ನು ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ.

 

Related