ಖಾದಿ ಬಟ್ಟೆ ಖರೀದಿಸಿ ಪ್ರೋತ್ಸಾಹಿಸಲು ಬಿ. ಶ್ರೀರಾಮುಲು ಮನವಿ

ಖಾದಿ ಬಟ್ಟೆ ಖರೀದಿಸಿ ಪ್ರೋತ್ಸಾಹಿಸಲು  ಬಿ. ಶ್ರೀರಾಮುಲು ಮನವಿ

ಬಳ್ಳಾರಿ : ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ನಗರದ ಪಾರ್ವತಿ ನಗರದಲ್ಲಿರುವ ಖಾದಿ ಬಂಡಾರದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಖಾದಿ ಬಟ್ಟೆಗಳನ್ನು ಖರೀದಿಸಿದರು.

ಈ ವೇಳೆ ಮಾತನಾಡಿ, ಮಹಾತ್ಮ ಗಾಂಧಿಜಿಯವರಿಗೆ ಅತ್ಯಂತ ಪ್ರಿಯವಾದ ಖಾದಿ ಬಟ್ಟೆ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಮಹಾತ್ಮ ಗಾಂಧಿಜಿಯವರ ಆಶಯದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ಕಚೇರಿಗಳಲ್ಲಿ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಿ ನೈರ್ಮಲ್ಯತೆ ಕುರಿತು ಜಾಗೃತಿ ಮೂಡಿಸುವಂತೆ ನಿರ್ದೇಶಿಸಿದ್ದೇನೆ.

ಅದರನ್ವಯ ರಾಜ್ಯದಲ್ಲಿರುವ ಇಲಾಖೆಯ ವ್ಯಾಪ್ತಿಯ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಚತಾ ಅಭಿಯಾನ ಹಾಗೂ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಗಾಂಧಿಜಿಯವರ ವಿಚಾರಧಾರೆಗಳನ್ನು ಮನನ ಮಾಡಿಕೊಡಲಾಗುವುದು ಎಂದು ತಿಳಿಸಿದರು.

Related