ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ

ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ

ಬೆಂಗಳೂರು : ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್ ಲೈನ್)  ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಪ್ರಕಟಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ ಮತ್ತೂ ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರ್ಕಾರ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಎಂದರು.

Related