ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ

ಬೆಂಗಳೂರು: ರಾಜ್ಯದ ರಾಜ್ಯಧಾನಿ ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲ್ವೆ ಭೋಗಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿರುವ ಘಟನೆ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಿಡೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್​ ಯಾವುದೆ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

 

Related