ಬೆಟ್ಟಿಂಗ್ ದಂಧೆ ಹೆಚ್ಚಿದೆ ಹೆಚ್‌ಡಿಕೆ ಆರೋಪ

ಬೆಟ್ಟಿಂಗ್ ದಂಧೆ ಹೆಚ್ಚಿದೆ ಹೆಚ್‌ಡಿಕೆ ಆರೋಪ

ಸಿಂಧಗಿ: ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಟ್ಕಾ, ಬೆಟ್ಟಿಂಗ್ ದಂಧೆಗಳು ಹೆಚ್ಚಾಗಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ರಾಜ್ಯದ ಬಿಜೆಪಿ ಸರ್ಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಿಂಧಗಿ ಕ್ಷೇತ್ರದ ಉಪ ಚುಣಾವಣೆ ಹಿನ್ನಲೆ, ಕ್ಷೇತ್ರದ ಯಂಕAಚಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು ಈ ದಂಧೆಯ ಕಬಂಧಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ದಂಧೆಗೆ ಸಿಕ್ಕಿ ಬಲಿಯಾಗುತ್ತಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ವಿಜಯಪುರ ಜಿಲ್ಲೆಯಲ್ಲಿ ಬೆಟ್ಟಿಂಗ್, ಮಟ್ಕಾ ದಂಧೆ ಮಿತಿಮೀರಿ ನಡೆಯುತ್ತಿದ್ದು, ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್ ಮಾಡಿಸಿಕೊಂಡಿರುವ ಅಧಿಕಾರಿಗಳಿಗೆ ʼಮಂತ್ಲಿʼ ತಪ್ಪದೇ ಹೋಗುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಈ ದಂಧೆ ನಡೆಸುವ ದೊಡ್ಡ ಗ್ಯಾಂಗಿದ್ದು, ಇದನ್ನು ಹತ್ತಿಕ್ಕದ ಸರಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

Related