ಮಂಗಳೂರು ಸಿಸಿಬಿ ಪೊಲೀಸರಿಂದ ಭರ್ಜರಿ ಎಣ್ಣೆಪಾರ್ಟಿ!

ಮಂಗಳೂರು ಸಿಸಿಬಿ ಪೊಲೀಸರಿಂದ ಭರ್ಜರಿ ಎಣ್ಣೆಪಾರ್ಟಿ!

ಮಂಗಳೂರು : ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್‌ನಲ್ಲಿ ಕುಳಿತುಕೊಂಡು ಭರ್ಜರಿ ಊಟದೊಂದಿಗೆ ಮದ್ಯಪಾನ ಮಾಡುತ್ತಿರುವುದನ್ನು ವೈರಲ್ ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ.

ಕರ್ತವ್ಯದಲ್ಲಿ ಇದ್ದ ವೇಳೆಯಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ನಡೆಸಿದ್ದಾರೆ. ವಿಡಿಯೋವೊಂದು ಸದ್ದು ಮಾಡುತ್ತಿದೆ.

ಇಲ್ಲದೇ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯ ಜೊತೆ ಎಂಟು ಮಂದಿ ಸಿಸಿಬಿ ಪೊಲೀಸರು ಬಾರಿನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಈ ಕುರಿತು ಮಂಗಳೂರು ಪೊಲೀಸ್ ಕಮೀಶನರ್ ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶನೀಡಿದ್ದಾರೆ.

Related