ಬಿಎಸ್ ಯಡಿಯೂರಪ್ಪ ಲೈಂಗಿಕ ಪ್ರಕರಣಕ್ಕೆ ಇದೀಗ ಬಿಗ್ ಲಿಸ್ಟ್..!

ಬಿಎಸ್ ಯಡಿಯೂರಪ್ಪ ಲೈಂಗಿಕ ಪ್ರಕರಣಕ್ಕೆ ಇದೀಗ ಬಿಗ್ ಲಿಸ್ಟ್..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇದೀಗ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ.

ಹೌದು, ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಎಸ್ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದನ್ನೂ ಓದಿ: ಇಷ್ಟೆಲ್ಲಾ ಆದ್ಮೇಲೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್

ಇತ್ತೀಚಿಗಷ್ಟೇ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ತ್ವರಿತಗತಿಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಮೂಲಗಳು ಹೇಳಿವೆ.

ಪ್ರಕರಣದ ಮೊದಲ ಆರೋಪಿ ಬಿ.ಎಸ್. ಯಡಿಯೂರಪ್ಪ, ಎರಡನೇ ಆರೋಪಿ ವೈ.ಎಂ. ಅರುಣ್, ಮೂರನೇ ಆರೋಪಿ ಎಂ. ರುದ್ರೇಶ್ ಹಾಗೂ ನಾಲ್ಕನೇ ಆರೋಪಿ ಜಿ. ಮರಿಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳ ವಿರುದ್ಧ ದೋಷರೋಪ ಹೊರಿಸಿರುವ ನ್ಯಾಯಾಧೀಶ ಎನ್.ಎಂ. ರಮೇಶ್, ವಿಚಾರಣೆಯನ್ನು ಮುಂದೂಡಿದ್ದಾರೆ. ಮುಂದಿನ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಪರ ವಕೀಲರು ಹಾಜರಾಗುವ ಸಾಧ್ಯತೆಯಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

 

Related