ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಬೆಂಗಳೂರು : ಕೊರೋನಾ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಹೆಚ್ಚಾಗಿದೆ. ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ಅಲ್ಲದೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳಿಸುವಂತ ನಿರ್ಧಾರವನ್ನು ಕೂಡ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.

ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ ಕೊರೋನಾ ಸೋಂಕಿನ ನಿಯಂತ್ರಣ ಕ್ರಮ ಕುರಿತಂತೆ ತುರ್ತು ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಮಹತ್ವದ ಕ್ರಮಗಳ ಚರ್ಚೆ ನಡೆಸಿದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ.

ಅಲ್ಲದೇ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕೂಡಾ ಆರೋಗ್ಯ ತುರ್ತು ಕಾರ್ಯಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ನಿರ್ಧರಿಸಲಾಗಿದೆ. ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿಗಳನ್ನು ಹೊರತು ಪಡಿಸಿ, ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಕ್ಕೆ ಮುಂದಾಗಿದೆ.

ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರಕ್ಕೆ ಸುಮಾರು 5000 ಸಾವಿರ ಕೋಟಿ ಆರೋಗ್ಯ ತುರ್ತು ಪರಿಸ್ಥಿತಿಗಾಗಿ ಉಳಿತಾಯವಾಗಲಿದೆ. ಕೇವಲ ಸರ್ಕಾರಿ ನೌಕರರ ವೇತನವಷ್ಟೇ ಅಲ್ಲದೇ, ಸಚಿವರು, ಶಾಸಕರು, ಪರಿಷತ್ ಸದಸ್ಯರ ವೇತನ ಕೂಡ ಕಡಿತಗೊಳಿಸುವ ಮೂಲಕ, ಆರೋಗ್ಯ ತುರ್ತು ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

Related