ಇಂಗ್ಲೆಂಡ್ ವಿರುದ್ಧದ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧದ ಭಾರತಕ್ಕೆ ಭರ್ಜರಿ ಜಯ

ವಿಶಾಖಪಟ್ಟಣಂ: ಇಂದು ವಿಶಾಖಪಟ್ಟಣದಲ್ಲಿ ನಡೆದ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ಮತ್ತು ಭಾರತದ ವಿರುದ್ಧ ನಡೆದ ಟೆಸ್ಟ್ ಪಂದ್ಯಾವಳಿಯಲ್ಲಿ ಭಾರತಕ್ಕೆ ಭರ್ಜರಿ ಜಯ ಸಿಕ್ಕಿದೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಸರಾಸರಿ 399 ರನ್ ಗಳಿಸುವ ಮೂಲಕ ಭಾರತ ಜಯಗಳಿಸಿದೆ. ಭಾರತದ ವಿರುದ್ಧ ಇಂಗ್ಲೆಂಡ್ 106 ರನ್ಗಳ ಅಂತರದಲ್ಲಿ ಹೀನಾಯ ಸೋಲನ್ನು ಕಂಡಿದೆ

ಮೊದಲ ಇನ್ನಿಂಗ್ಸ್‌ನ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನೀಡಿದ 399 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡವು 292 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್‌ ಪರ ಜಾಕ್‌ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್‌ 292 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತದ ಪರ ಜಸ್‌ಪ್ರೀತ್‌ ಬೂಮ್ರಾ ಹಾಗೂ ಕುಲದೀಪ್‌ ಯಾದವ್‌ ತಲಾ 3 ವಿಕೆಟ್‌ ಪಡೆದು ಮಿಂಚಿದರು.

ಉಭಯ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಬುಮ್ರಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Related