ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ

ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ

ಟಿ-20 ವಿಶ್ವ ವರ್ಲ್ಡ್ ಕಪ್ 2024 ಈಗಾಗಲೇ ಪ್ರಾರಂಭವಾಗಿದ್ದು, ನಿನ್ನೆ ಇಂಡಿಯಾ ಮತ್ತು ಪಾಕಿಸ್ತಾನ ನಡುವೆ ರಣರೋಚಕ ಪಂದ್ಯ ನಡೆದಿದ್ದು, ಈ ಪಂದ್ಯದಲ್ಲಿ ಇಂಡಿಯಾ ಟೀಮ್ ಗೆದ್ದು ವಿಶ್ವ ದಾಖಲೆಯನ್ನು ಬರೆದಿದೆ.

ಹೌದು, ನಿನ್ನೆ (ಭಾನುವಾರ ಜೂನ್ 8) ರಂದು ಇಂಡಿಯಾ ಪಾಕಿಸ್ತಾನ ಮದ್ಯ ರಣರೋಚಕ ಹಣಹಣಿ ನಡೆದಿದ್ದು, ಈ ಪಂದ್ಯದಲ್ಲಿ ಇಂಡಿಯಾ ಟೀಮ್ ಗೆಲುವಿನ ನಗೆ ಬಿರಿ ವಿಶ್ವ ದಾಖಲೆ ಸೃಷ್ಟಿಸಿದೆ.

ಯೆಸ್…ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

 

Related