ದೇವೇಗೌಡ್ರ ಹುಟ್ಟುಹಬ್ಬಕ್ಕೆ ಗಣ್ಯಾತಿ ಗಣ್ಯರಿಂದ ಶುಭ ಕೋರಿಕೆ

ದೇವೇಗೌಡ್ರ ಹುಟ್ಟುಹಬ್ಬಕ್ಕೆ ಗಣ್ಯಾತಿ ಗಣ್ಯರಿಂದ ಶುಭ ಕೋರಿಕೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಇಂದು 92ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಇನ್ನು ಮಾಜಿ ಪ್ರಧಾನಿ ದೇವೇಗೌಡ ಅವರ ಹುಟ್ಟುಹಬ್ಬಕ್ಕೆ ಗಣ್ಯಾತಿ ಗಣ್ಯರು ಶುಭ ಕೋರಿದ್ದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಫಿಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ಜನತಾದಳ ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು – ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ ಅನುಭವ, ಮಾರ್ಗದರ್ಶನ ಮುಂದೆಯೂ ನಾಡಿಗೆ ದೊರಕಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿ, ಭಾರತ ಗಣರಾಜ್ಯದ 11ನೇ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ ಡಾ. ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಇನ್ನಷ್ಟು ಆಯುರಾರೋಗ್ಯ ನೀಡಲಿ ಹಾಗೂ ಅವರ ಮಾರ್ಗದರ್ಶನ, ಜನಸೇವೆ ದೀರ್ಘಕಾಲ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, “ಹಿರಿಯ ಮುತ್ಸದ್ದಿ ನಾಯಕರು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ:  92ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ. ವಜಯೇಂದ್ರ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು. ವಯಸ್ಸು ಲೆಕ್ಕಿಸದ ಅವರ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ, ಗ್ರಾಮೀಣ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅವರು ಅತ್ಯಮೂಲ್ಯ ಮಾರ್ಗದರ್ಶನ ನೀಡುವಂತಾಗಲಿ ಎಂದು ಪ್ರಾರ್ಥಿಸುವೆ ಎಂದು ಕೋರಿದ್ದಾರೆ.

 

Related